ಬೀದರ್ : ಉದ್ಯಮಿ ಬಸವರಾಜ ಧನ್ನೂರ ಅವರಿಗೆ ಉತ್ತಮ ಭವಿಷ್ಯ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದಲ್ಲಿಯ ಬಸವ ಪ್ರಸಾದ ಇಂಡಸ್ಟ್ರೀಸ್‍ನಲ್ಲಿ ಗಾಂಧಿಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಅವರ 50ನೇ ಜನ್ಮದಿನ ಹಾಗೂ 25ನೇ ವಿವಾಹ ಮಹೋತ್ಸವದ ನಿಮಿತ್ತ ಹೊರ ತರಲಾದ ಬಸವ ವಚನ ಗ್ರಂಥವನ್ನು ಭಾನುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಧನ್ನೂರ ಜೀವನದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಬಸವ ತತ್ವದ ಮಾರ್ಗದಲ್ಲಿ ಸಾಗುತ್ತಿದ್ದಾರೆ. ಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದರು.
ಬರುವ ದಿನಗಳಲ್ಲಿ ಅವರು ಇನ್ನೂ ಹೆಚ್ಚಿನ ಸೇವೆ ಮಾಡಿ ಜಿಲ್ಲೆಯ ಜನರ ಪ್ರೀತಿ, ಅಭಿಮಾನಕ್ಕೆ ಪಾತ್ರರಾಗಲಿ ಎಂದು ಶುಭ ಹಾರೈಸಿದರು.
ವಚನಗಳಲ್ಲಿ ಜೀವನ ಮೌಲ್ಯಗಳಿವೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದೆ. ಹೀಗಾಗಿ ಬಸವಾದಿ ಶರಣರ ವಚನಗಳನ್ನು ಎಲ್ಲರೂ ಓದಿ, ಅವುಗಳ ಸಾರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರಸ್ತುತ ಮಕ್ಕಳಿಗೆ ಉತ್ತಮ ಸಂಸ್ಕಾರದ ಅವಶ್ಯಕತೆ ಇದೆ ಎಂದು ತಿಳಿಸಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷರೂ ಆದ ಬಸವರಾಜ ಧನ್ನೂರ ಹಾಗೂ ಸುವರ್ಣಾ ಧನ್ನೂರ ದಂಪತಿಯನ್ನು ಗಣ್ಯರು ಸನ್ಮಾನಿಸಿದರು. ಸಚಿವರಾದ ಈಶ್ವರ ಖಂಡ್ರೆ, ರಹೀಂಖಾನ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಮಾರುತಿರಾವ್ ಮುಳೆ, ಜಿ.ಎನ್. ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಬಲಬೀರಸಿಂಗ್ ದಂಪತಿಯನ್ನು ಸನ್ಮಾನಿಸಲಾಯಿತು.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿ, ವಿಜಯಪುರದ ಜ್ಞಾನ ಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಹುಲಸೂರಿನ ಶಿವಾನಂದ ಸ್ವಾಮೀಜಿ, ಬರ್ದಿಪುರದ ಅವಧೂತಗಿರಿ ಮಹಾರಾಜ, ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಮನ್ನಾಎಖ್ಖೆಳ್ಳಿಯ ಮಾತೆ ಮೈತ್ರಾದೇವಿ, ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕೆ ಅಕ್ಕ, ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ, ರಾಜಮಲ್ಲಯ್ಯ ಸ್ವಾಮಿ ಬೋರಂಚಿ ಸಾನಿಧ್ಯ ವಹಿಸಿದ್ದರು. ಸ್ಫೂರ್ತಿ ಧನ್ನೂರ ಸ್ವಾಗತಿಸಿದರು. ಮನೀಶಾ ಪಾಟೀಲ ನಿರೂಪಿಸಿದರು.