ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ
ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ
ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ
ಬೀದರ್: ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಪಠ್ಯಪುಸ್ತಕ ವಿತರಿಸಲಾಯಿತು.
ಎಸ್‍ಎಸ್‍ಎಲ್‍ಸಿ ಪ್ರಥಮ ಪೂರಕ ಪರೀಕ್ಷೆ ಪ್ರಯುಕ್ತ ಮೇ 29 ರಂದು ಶಾಲೆಯಲ್ಲಿ ಆರಂಭೋತ್ಸವ ನಡೆದಿರಲಿಲ್ಲ. ಹೀಗಾಗಿ ಸೋಮವಾರ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಪುಷ್ಪ ವೃಷ್ಟಿ ಮಾಡಿ, ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ಸಿಹಿ ತಿನಿಸು ಕೊಟ್ಟು, ಉಚಿತ ಪಠ್ಯಪುಸ್ತಕ ವಿತರಣೆ ಮಾಡಲಾಯಿತು.

ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಪರಿಶ್ರಮದ ಮೂಲಕ ಅದನ್ನು ನನಸಾಗಿಸಿಕೊಳ್ಳಬೇಕು ಎಂದು ಶಾಲಾ ಆರಂಭೋತ್ಸವ ಹಾಗೂ ಪುಸ್ತಕ ವಿತರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಹೇಳಿದರು.
ವಿದ್ಯಾರ್ಥಿಗಳು ಆತ್ಮವಿಶ್ವಾಸ ಮೈಗೂಡಿಸಿಕೊಳ್ಳಬೇಕು. ಸಾಧನೆಗಾಗಿ ಮೊಬೈಲ್ ಬಿಟ್ಟು, ಓದಿನತ್ತ ಗಮನ ಕೇಂದ್ರೀಕರಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮಣ ಪೂಜಾರಿ ಸಲಹೆ ಮಾಡಿದರು.
ಏಕಾಗ್ರತೆಯಿಂದ ಸತತ ಅಭ್ಯಾಸ ಮಾಡುವುದರಿಂದ ಜೀವನದ ಗುರಿ ಮುಟ್ಟಲು ಸಾಧ್ಯವಿದೆ ಎಂದು ಕುಂಬಾರವಾಡ ಸಿಆರ್‍ಪಿ ಸಿದ್ದಲಿಂಗಯ್ಯ ಮಾತನಾಡಿದರು.
ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸೂರ್ಯಕಾಂತ ಐನಾಪುರೆ, ಶಿಕ್ಷಕರಾದ ಗೋಪಾಲ್ ಕುಲಕರ್ಣಿ, ಶರಣಪ್ಪ ಸಾಗರ್, ಕಾಶಿನಾಥ ಸೊಂತ, ಸತ್ಯವಾನ್ ಭೊಸ್ಲೆ, ನಾಗನಾಥ, ನಾಗಪ್ಪ, ಸತ್ಯವತಿ ಪಾಟೀಲ, ವಿಜಯಲಕ್ಷ್ಮಿ, ಮಹಾನಂದಾ ಇದ್ದರು.
