Friday, January 16, 2026
HomePopularರೈಲ್ವೆ ಖಾತೆ ರಾಜ್ಯ ಸಚಿವರಿಗೆ ಡಾ. ರಾಜಶೇಖರ ಶಿವಾಚಾರ್ಯ ಒತ್ತಾಯ ಬಸವಕಲ್ಯಾಣಕ್ಕೆ ರೈಲು ಸಂಪರ್ಕ ಕಲ್ಪಿಸಿ

ರೈಲ್ವೆ ಖಾತೆ ರಾಜ್ಯ ಸಚಿವರಿಗೆ ಡಾ. ರಾಜಶೇಖರ ಶಿವಾಚಾರ್ಯ ಒತ್ತಾಯ ಬಸವಕಲ್ಯಾಣಕ್ಕೆ ರೈಲು ಸಂಪರ್ಕ ಕಲ್ಪಿಸಿ

ರೈಲ್ವೆ ಖಾತೆ ರಾಜ್ಯ ಸಚಿವರಿಗೆ ಡಾ. ರಾಜಶೇಖರ ಶಿವಾಚಾರ್ಯ ಒತ್ತಾಯ
ಬಸವಕಲ್ಯಾಣಕ್ಕೆ ರೈಲು ಸಂಪರ್ಕ ಕಲ್ಪಿಸಿ

ಬೀದರ್: ಬಸವಾದಿ ಶರಣರ ಕರ್ಮಭೂಮಿ ಬಸವಕಲ್ಯಾಣಕ್ಕೆ ರೈಲು ಸಂಪರ್ಕ ಕಲ್ಪಿಸಬೇಕು ಎಂದು ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಒತ್ತಾಯಿಸಿದ್ದಾರೆ.

ಬೀದರ್‍ನಲ್ಲಿ ಈಚೆಗೆ ಈ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಸವಕಲ್ಯಾಣದ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತು ಎಂದೇ ಹೆಸರಾಗಿದೆ. ಬಸವಣ್ಣನವರ ಕಾಯಕ- ದಾಸೋಹ ತತ್ವ, ಸಾಮಾಜಿಕ ಕ್ರಾಂತಿಯಿಂದಾಗಿ ಈ ನೆಲ ವಿಶ್ವಮಾನ್ಯವಾಗಿದೆ. ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಭವ್ಯ ನೂತನ ಅನುಭವ ಮಂಟಪ ನಿರ್ಮಿಸುತ್ತಿದೆ. ಇಂದಲ್ಲ, ನಾಳೆ ಬಸವಕಲ್ಯಾಣ ಜಗತ್ತಿನ ಗಮನ ಸೆಳೆಯಲಿದೆ. ಎಲ್ಲೆಡೆಯ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯಲಿದೆ ಎಂದು ಗಮನ ಸೆಳೆದರು.
ಈಗಾಗಲೇ ರಾಜ್ಯ ಹಾಗೂ ನೆರೆ ರಾಜ್ಯಗಳ ಭಕ್ತರು ಬಸವಕಲ್ಯಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ನೂತನ ಅನುಭವ ಮಂಟಪ ನಿರ್ಮಾಣ ಆರಂಭವಾದ ನಂತರ ಈ ಸಂಖ್ಯೆ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದರು.
ರೈಲ್ವೆ ಸಂಪರ್ಕವಾದರೆ ದೇಶ, ವಿದೇಶದ ಪ್ರವಾಸಿಗರ ದಂಡು ಬಸವಕಲ್ಯಾಣಕ್ಕೆ ಹರಿದು ಬರುವ ವಿಶ್ವಾಸ ಇದೆ. ರೈಲ್ವೆ ಸಂಪರ್ಕದಿಂದ ಪ್ರವಾಸಿಗರಿಗೆ ಅನುಕೂಲವಾಗುವ ಜತೆಗೆ ವ್ಯಾಪಾರ, ಉದ್ಯೋಗ, ಕೈಗಾರಿಕೆಗಳ ವೃದ್ಧಿಯಾಗಲಿದೆ. ಇದರಿಂದ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ ಎಂದು ಮನವರಿಕೆ ಮಾಡಿದರು.
ಹುಮನಾಬಾದ್ ಇಲ್ಲವೇ ಕಮಲಾಪುರದಿಂದ ಬಸವಕಲ್ಯಾಣಕ್ಕೆ ರೈಲು ಮಾರ್ಗ ನಿರ್ಮಿಸಬೇಕು. ಭಾರತೀಯ ರೈಲ್ವೆಯೊಂದಿಗೆ ಬಸವಕಲ್ಯಾಣವನ್ನು ಜೋಡಿಸಬೇಕು ಎಂದು ಬೇಡಿಕೆ ಮಂಡಿಸಿದರು.
ತಮ್ಮ ಮನವಿಗೆ ಸ್ಪಂದಿಸಿದ ಸಚಿವರು, ಬಸವಕಲ್ಯಾಣಕ್ಕೆ ರೈಲು ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಡಾ. ರಾಜಶೇಖರ ಶಿವಾಚಾರ್ಯ ತಿಳಿಸಿದ್ದಾರೆ.
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ, ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ, ಡಾ. ಚಂದ್ರಕಾಂತ ಗುದಗೆ, ಸಂಜುಕುಮಾರ ಸಿದ್ದಾಪುರ, ರಮೇಶ ಅರಳಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3