ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಬೀದರ್ : 2025-26ನೇ ಸಾಲಿಗೆ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಗಳ ಅನುಷ್ಠಾನಕ್ಕಾಗಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ವರ್ಗಗಳ ಅಬಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ದಿನಾಂಕ: 30-06-2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov. in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22865522, 9900012351, 9900012352 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾವ್ಯವಸ್ಥಾಪಕರು, ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
*****
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ದಿನಾಂಕ: 30-06-2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.
*****
