Friday, January 16, 2026
HomePopularಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ - ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ್ – ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಜೂನ್ 2025 ರ ಜಿಲ್ಲಾಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ಮತ್ತು ತಿವ್ರ ಅತಿಸಾರ ನಿಯಂತ್ರಣ ಪಾಕ್ಷಿಕ 2025 ರ ಅಂತರ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಬಡ ಜನರು ಹೆಚ್ಚು ವೆಚ್ಚ ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಆಗುವುದಿಲ್ಲ ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಆಸ್ಪತ್ರೆಯ ಅಧಿಕಾರಿಗಳು ಜನರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ನಡೆದುಕೊಳ್ಳಬೇಕು ಮತ್ತು ಜನರಿಗೆ ಕಾಡುವ ಸಾಮಾನ್ಯ ವಿಷಯವೆಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಕಾಳಜಿ ವಹಿಸುವುದಿಲ್ಲ ಎಂಬುದಾಗಿದೆ ಆದರೆ ಇದನ್ನು ನಾವು ಅವರ ಮನಸ್ಸಿನಿಂದ ಹೋಗಲಾಡಿಸಿ ಉತ್ತಮ ಸಹಕಾರದೊಂದಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಈಗಾಗಲೇ ಮಳೆಗಾಲ ಆರಂಭವಾಗಿದ್ದು ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಆದ್ದರಿಂದ ನಾವು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸಿ ಮಲೇರಿಯಾ, ಡೆಂಗ್ಯೂ, ಚಿಕನ್ ಗೂನ್ಯ, ಆನೆಕಾಲು ರೋಗ ಮುಂತಾದವುಗಳನ್ನು ಹರಡುವುದನ್ನು ನಿಯಂತ್ರಿಸಬೇಕು ಮತ್ತು ಹಳ್ಳಿ ಹಳ್ಳಿಗೆ ಭೇಟಿ ನೀಡಿ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ತಿಳಿಸಿದರು. ಶಾಲಾ ಮಕ್ಕಳ, ಅಂಗನವಾಡಿ ಮಕ್ಕಳ ಮತ್ತು ಗರ್ಭಿಣಿಯರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಬೀದರ ಜಿಲ್ಲೆಯನ್ನು ಅನಾಮೀಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅರಿವು ಮೂಡಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ಮತ್ತು ತಾಯಂದಿರಿಗೆ ಪೌಷ್ಟಿಕ ಆಹಾರ ಒದಗಿಸಲಾಗು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ರೋಗಗಳ ಜಾಗೃತಿ ಮತ್ತು ಅರಿವು ಮೂಡಿಸುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಈ ಸಭೆಯಲ್ಲಿ ಪ್ರೊಬೇಷನರಿ IAS ಅಧಿಕಾರಿ ರಮ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಕೆ.ಪಿ.ಎಮ್.ಇ ನೋಡಲ್ ಅಧಿಕಾರಿ ಡಾಕ್ಟರ್ ದಿಲೀಪ್ ಡೋಂಗ್ರೆ, ಜಿಲ್ಲಾ ಆಯುಷ್ ಅಧಿಕಾರಿ ಖುತಿಜಾ ಬೇಗಂ, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಗಾಯತ್ರಿ, ಡಾ. ಸಂಗಾರೆಡ್ಡಿ, ಡಾ. ಶಿವಕುಮಾರ ಸಿದ್ದೇಶ್ವರ, ರವಿ ಕಲಶೆಟ್ಟಿ ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3