ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 98.06 ರಷ್ಟು ಅಂಕ ಗಳಿಸಿ ಸಾಧನೆಗೈದ ಜಿಲ್ಲೆಯ ಚನ್ನಬಸವ ಮಲ್ಲಿಕಾರ್ಜುನ ಮರಕಲೆ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 97.66 ರಷ್ಟು ಅಂಕ ಪಡೆದ ಕೃತಿ ಕಲ್ಯಾಣರಾವ್ ಮದರಗಾಂವಕರ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಸಂಘದ ವತಿಯಿಂದ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಈ ಇಬ್ಬರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಹೈದರಾಬಾದ್‍ನ ಮಾದಾಪುರದ ಶ್ರೀ ಚೈತನ್ಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರೈಸಿರುವ ಚನ್ನಬಸವ ಗಣಿತ, ಭೌತ ವಿಜ್ಞಾನ, ರಸಾಯನ ವಿಜ್ಞಾನದಲ್ಲಿ ಗರಿಷ್ಠ ಅಂಕ, ಸಂಸ್ಕøತದಲ್ಲಿ ಶೇ 98 ಹಾಗೂ ಇಂಗ್ಲಿಷ್‍ನಲ್ಲಿ ಶೇ 97 ರಷ್ಟು ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಜಿಲ್ಲೆಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಮರಕಲೆ ಅವರ ಪುತ್ರರಾಗಿದ್ದಾರೆ.
ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಇಬ್ಬರು ಪತ್ರಕರ್ತರ ಮಕ್ಕಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮತ್ತಿತರರು ಇದ್ದರು.