ಚರ್ಚ್ ನಿರ್ಮಾಣಕ್ಕೆ ಅನುದಾನ: ಒತ್ತಾಯ
ಬೀದರ್: ತಾಲ್ಲೂಕಿನ ಪ್ರತಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ತಲಾ 1 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಹಮಿಲಾಪುರದ ದಿ ಬುದ್ಧ ಯುಥ್ ಕ್ಲಬ್ ಅಧ್ಯಕ್ಷ ಮಹೇಶ ಎಸ್. ರಾಂಪುರೆ ಒತ್ತಾಯಿಸಿದ್ದಾರೆ.
ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗೆ ಈ ಕುರಿತು ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.
ಈಗಾಗಲೇ ಕೆಲ ಗ್ರಾಮಗಳಲ್ಲಿ ಚರ್ಚ್‍ಗಳ ಕಾಮಗಾರಿ ನಡೆದಿದ್ದು, ಅವುಗಳಿಗೆ ಇನ್ನೂ ಹೆಚ್ಚಿನ ಅನುದಾನ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೋಬಳಿ ಮಟ್ಟದಲ್ಲಿ ಚರ್ಚ್ ನಿರ್ಮಾಣಕ್ಕೆ 2 ಕೋಟಿ ರೂ, ತಾಲ್ಲೂಕು ಮಟ್ಟದಲ್ಲಿ 5 ಕೋಟಿ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಚರ್ಚ್ ನಿರ್ಮಾಣಕ್ಕೆ 10 ಕೋಟಿ ಅನುದಾನ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.