ನಮ್ಮ ಕರ್ನಾಟಕ ಸೇನೆಯಿಂದ ಅಬಕಾರಿ ಉಪ ಆಯುಕ್ತರಿಗೆ ಮನವಿ ಪತ್ರ
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಬೀದರ್: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಆಗ್ರಹಿಸಿದೆ.
ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ನಿಯೋಗದಲ್ಲಿ ಈ ಕುರಿತು ಅಬಕಾರಿ ಉಪ ಆಯುಕ್ತ ರವಿಶಂಕರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಂಗಡಿ, ಹೊಟೇಲ್, ಧಾಬಾಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ದೂರಿದರು.
ಕೆಲ ವೈನ್‍ಶಾಪ್‍ಗಳ ಮಾಲೀಕರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮೊಟಾರ್ ಸೈಕಲ್ ಹಾಗೂ ವಾಹನಗಳಲ್ಲಿ ಹಳ್ಳಿಗಳಿಗೆ ಮದ್ಯ ಪೂರೈಕೆ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ಭಯ ಇಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಈ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದರು.

ಅನೇಕರು ದಿನವಿಡೀ ದುಡಿದ ಹಣವನ್ನು ಮದ್ಯಕ್ಕೆ ಖರ್ಚು ಮಾಡಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅನೇಕ ಬಡ ಕುಟುಂಬಗಳು ಬೀದಿಗೆ ಬರುತ್ತಿವೆ ಎಂದು ದೂರಿದರು.
ಅಕ್ರಮ ಮದ್ಯ ಮಾರಾಟ ಹಾಗೂ ಸಾಗಣೆ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 15 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ದತ್ತಾತ್ರಿ ಅಲ್ಲಂಕೆರೆ, ಶಶಿಕುಮಾರ ಅಷ್ಟೂರೆ, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸುಧಾಕರ್ ರಾಠೋಡ್, ರಾಜಕುಮಾರ ಸ್ವಾಮಿ, ಗಿರೀಶ್ ಬಿರಾದಾರ, ಸಂತೋಷ್, ಅನಿಲ್ ರಾಜಗೀರಾ, ರವಿ ಪಾಟೀಲ, ಮಹಾಲಿಂಗ ಬೆನಕನಳ್ಳಿ, ಕಿರಣ ಅಯಾಸಪುರೆ, ಕಿರಣ ಗಂದಗೆ, ಕೃಷ್ಣ ಕುಂಬಾರ, ಅಪ್ಪು ಸ್ವಾಮಿ ಮತ್ತಿತರರು ಇದ್ದರು.