ಜುಲೈ.10 ರಂದು ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ
ಬೀದರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಜುಲೈ.10 ರಂದು ಬೆಳಿಗ್ಗೆ 11.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರ ಬೀದರ ಇಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ, ಬೀದರ ನಗರಶಬೆ ಅಧ್ಯಕ್ಷ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷರಾದ ಪೂಜ್ಯ ಶ್ರೀ ನಾಡೋಜ ಡಾ.ಬಸವಲಿಂಗ ಪಟ್ಟದೇವರು ನೀಡಲಿದ್ದಾರೆ.
*****