ರೇಕುಳಗಿ : 3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ
ಬೀದರ್ : ಈ ರಸ್ತೆಗಳ ಅಭಿವದ್ಧಿಯಿಂದ ಮಳೆಗಾಲದಲ್ಲಿ ತೊಂದರೆ ಎದುರಿಸುತ್ತಿದ್ದ ರೈತರಿಗೆ ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಾಟದ ಜತೆಗೆ ರೈತರ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಮತ್ತು ಈ ಭಾಗದ ಸುಪ್ರಸಿದ್ಧ ರೇಕುಳಗಿ ಶಂಭು ಲಿಂಗೇಶ್ವರ ಬಸಮ್ಮ ತಾಯಿಯವರ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಬಂಬುಳಗಿ ಗ್ರಾಮದಿಂದ ರೇಕುಳಗಿ ಗ್ರಾಮದ ವರಗೆ ಸುಮಾರು ೩ ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷೇತ್ರದ ಎಲ್ಲ ಹಳ್ಳಿಗಳಲ್ಲಿ ಒಂದಿಲ್ಲೊಂದು ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಾಮಾಜಿಕ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ನೀರಾವರಿ, ಶಾಲೆ ಕಟ್ಟಡ, ಸಮುದಾಯ ಭವನ, ಕಲ್ಯಾಣ ಮಂಟಪ ಹೀಗೆ ಅನೇಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಜನತೆಗಾಗಿ ಹಲವಾರು ದೊಡ್ಡ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದೇನೆ. ಅನುದಾನ ಬಿಡುಗಡೆಯಾದ ಕೂಡಲೇ ಕೆಲಸ ಆರಂಭಿಸಲಾಗುವುದು ಕ್ಷೇತ್ರದ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಗಳು ಸಹ ಪ್ರಗತಿಯಲ್ಲಿರುವ ಕಾಮಗಾರಿಗಳ ಕಡೆ ಹೆಚ್ಚಿನ ನಿಗಾ ವಹಿಸಬೇಕು ಎಂದರು. ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲ ಸೌಕರ್ಯ ಕೊರತೆ ಉಂಟಾದರೆ ನಮ್ಮ ಕಚೇರಿಗೆ ಸಂಪರ್ಕಿಸಬೇಕು ಗ್ರಾಮ ಪಂಚಾಯಿತಿ ಕಚೇರಿ ಅಧಿಕಾರಿಗಳು ಸಹ ಜನರ ಸಮಸ್ಯೆಗಳ ಅಹವಾಲು ಸ್ವೀಕರಿಸಿ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.
ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನ ಅವಶ್ಯಕತೆ ಇದೆ ನಮ್ಮ ಕ್ಷೇತ್ರದಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಹೆಚ್ಚಿನ ಅನುದಾನ ಅವಶ್ಯಕತೆ ಇದ್ದು ಇಗಾಗಲೇ ಯೋಜನೆ ರೂಪಿಸಲಾಗಿದೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸಮರ್ಪಕವಾಗಿ ಅನುದಾನ ದೊರೆತಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಬಹುದು ಎಂದರು. ಇಂದು ಚಾಲನೆ ನೀಡಲಾದ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ, ಮುಖಂಡರಾದ ಶಿವಕುಮಾರ ಸ್ವಾಮಿ, ಸುರೇಶ ಮಾಶೆಟ್ಟಿ, ಬಸವರಾಜ ನೀಲಾ, ಬಸವರಾಜ ಬೋರಾಳ, ಶಿವಕುಮಾರ್ ದೇಶಪಾಂಡೆ, ಚಂದ್ರಯ್ಯ ಸ್ವಾಮಿ, ಸಂಜೀವಕುಮಾರ ಕೋಳಿ, ಗ್ರಾಪಂ ಉಪಾಧ್ಯಕ್ಷೆ ಶಿಲ್ಪಾ ಭಕ್ತಕುಮಾರ, ವೀರಶೆಟ್ಟಿ ಮೂಲಗೆ, ವೀರಶೆಟ್ಟಿ ಭೂರೆ, ಘಾಳೇಪ್ಪ ಚಟ್ಟನಳ್ಳಿ, ಹೇಮಾ ತುಕ್ಕಾರೆಡ್ಡಿ, ಸಂತೋಷಿ ನಿಡವಂಚಾ, ಸಂತೋಷ ರೆಡ್ಡಿ, ಸಂತೋಷ ಹಳ್ಳಿಖೇಡ, ನರಸಪ್ಪ, ರಾಜಕುಮಾರ ಪಾಂಚಾಳ, ತಾಜೋದಿನ್, ಸಚೀನ್ ಮಡಿವಾಳ, ನಾಗಶೆಟ್ಟಿ ಚಟ್ನಳ್ಳಿ, ದ್ರೌಪದಿ, ಲೋಕೇಶ, ಇಲಿಯಾಸ್, ಪ್ರವೀಣ ಮತ್ತಿತರರು ಉಪಸ್ಥಿತರಿದ್ದರು.