ಅಭಿವೃದ್ಧಿ ಪ್ರಸ್ತಾವ: ವಿಸ್ತøತ ಯೋಜನಾ ವರದಿ ಸಲ್ಲಿಸಿ
ಬೀದರ್: ಬೀದರ್ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವಗಳ ವಿಸ್ತøತ ಯೋಜನಾ ವರದಿ ಸಲ್ಲಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿದರು.
ವಿಧಾನಸೌಧದ ಕಚೇರಿಯಲ್ಲಿ ಮಂಗಳವಾರ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಮೇ ನಲ್ಲಿ ನಡೆದಿದ್ದ ಸಭೆಯಲ್ಲಿ ತಾವು ಸಲ್ಲಿಸಿದ್ದ 26 ಪ್ರಸ್ತಾವಗಳ ವಿಸ್ತøತ ಯೋಜನಾ ವರದಿ ಸಲ್ಲಿಕೆಗೆ ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಈಗಾಗಲೇ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪಿ.ಎಂ.ಐ. ವಿಭಾಗದ ಜಂಟಿ ನಿರ್ದೇಶಕರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಕೆಲ ಯೋಜನೆಗಳಿಗೆ ಅನುಮೋದನೆ ಕೊಟ್ಟು, ಉಳಿದ ಯೋಜನೆಗಳ ಕುರಿತು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಬೇಕೆಂಬ ತಮ್ಮ ಸಲಹೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ಸಹ ಕೊಟ್ಟಿದ್ದಾರೆ ಎಂದು ಹೇಳಿದರು.
ಬೀದರ್ ಜಿಲ್ಲೆಯ ಕಾರಂಜಾ ನೀರಾವರಿ ಯೋಜನೆ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಕಲ್ಪಿಸಬೇಕು. ಕಾರ್ಖಾನೆಗಳಿಗೆ ಮೂಲಸೌಕರ್ಯ ಒದಗಿಸಬೇಕು. ಬೀದರ್ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು. ಮೂಲಸೌಕರ್ಯಕ್ಕೆ ರೂ. 100 ಕೋಟಿ ಅನುದಾನ ಮಂಜೂರು ಮಾಡಬೇಕು. ಬೀದರ್‍ನಲ್ಲಿ ಬಿದ್ರಿ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಬೇಕು. ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಅನ್ವಯ ಹುದ್ದೆ ಭರ್ತಿ ಮಾಡಬೇಕು ಎನ್ನುವುದು ಸೇರಿ ವಿವಿಧ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ. ಆದಷ್ಟು ಬೇಗ ವಿಸ್ತ್ರøತ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.
ಕೇಂದ್ರದ ಯೋಜನೆಗಳ ಅನುಷ್ಠಾನದಲ್ಲಿ ಶೇ 100 ರಷ್ಟು ಸಾಧನೆಗೈದ ಐಎಎಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಿ ಪ್ರೋತ್ಸಾಹಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಚರ್ಚೆ ವೇಳೆ ಮುಖ್ಯ ಕಾರ್ಯದರ್ಶಿ ಅವರು ವಿಸ್ತøತ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸಲು ತಮ್ಮ ಅಧೀನ ಅಧಿಕಾರಿಗಳಿಗೆ ನಿರ್ದೇಶನ ಕೊಡಲಾಗುವುದು. ಬೀದರ್ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದು ತಿಳಿಸಿದರು ಎಂದು ಶಿವಯ್ಯ ಸ್ವಾಮಿ ಹೇಳಿದರು.
ಶಿವಯ್ಯ ಸ್ವಾಮಿ ಅವರು ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ಅಂಗವಾಗಿ ಇದೇ ವೇಳೆ ಡಾ. ಶಾಲಿನಿ ರಜನೀಶ್ ಅವರಿಗೆ ಬಿಲ್ವಪತ್ರಿ ಸಸಿ ವಿತರಿಸಿದರು.
