ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ
ಬೀದರ್ : ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ 13 ರವರೆಗೆ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು. 70 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9902561957 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
*****