ಔರಾದ(ಬಿ)ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಔರಾದ ಸಮಗ್ರ ಅಭಿವೃದ್ಧಿಯೇ ಪರಮ ಸಂಕಲ್ಪ: ಪ್ರಭು ಚವ್ಹಾಣ
—
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಹೊಂದಿರುವ ಔರಾದ(ಬಿ) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಈ ದಿಶೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.
ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು ಪಟ್ಟಣದ ಔರಾದ(ಬಿ) ತಾಲ್ಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾಜನತೆಯ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ಸಿಕ್ಕಿದೆ. ಅವರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದ ಔರಾದ(ಬಿ) ಕ್ಷೇತ್ರ ಅಭಿವೃದ್ಧಿ ಪಥದತ್ತ ಮುನ್ನುಗ್ಗುತ್ತಿದೆ. ಹಿಂದೆ ರಸ್ತೆಗಳೇ ಇರಲಿಲ್ಲ. ನನ್ನ ನಿರಂತರ ಪ್ರಯತ್ನದಿಂದಾಗಿ ಎರಡು ರಾಷ್ಟಿçÃಯ ಹೆದ್ದಾರಿಗಳಾಗಿವೆ. ಮಾಳೆಗಾಂವ, ಚಿಮ್ಮೇಗಾಂವ ಗ್ರಾಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಪವರ್ ಗ್ರಿಡ್ ಸೆಂಟರ್ ಮಂಜೂರು ಮಾಡಿಸಿದ್ದು, 164 ಎಕರೆಯಲ್ಲಿ 2147 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದೆ ಎಂದರು.
ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಕ್ಷೇತ್ರದ 36 ಕೆರೆಗಳನ್ನು ತುಂಬಿಸುವ 560 ಕೋಟಿಯ ಯೋಜನೆಗೆ ಮಂಜೂರಾತಿ ಪಡೆದಿದ್ದು, ಟೆಂಡರ್ ಆಗಿದೆ. ಜಲ ಜೀವನ ಮಿಷನ್ ಯೋಜನೆಗೆ 240 ಕೋಟಿಗೂ ಹೆಚ್ಚಿನ ಅನುದಾನ ತಂದಿದ್ದು, ಯೋಜನೆಯ ಬಗ್ಗೆ ಸಾಕಷ್ಟು ದೂರುಗಳಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ನಾಗೂರ(ಬಿ)ನಲ್ಲಿ 118 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಹಂತದಲ್ಲಿದೆ. ಬಲ್ಲೂರ(ಜೆ)ನಲ್ಲಿ ಸಿಪೆಟ್ ಕೇಂದ್ರಕ್ಕೆ 90 ಕೋಟಿ ಅನುದಾನ ಮಂಜೂರು ಮಾಡಿಸಿದ್ದು, ಯೋಜನೆ ಅನುಷ್ಟಾನಕ್ಕೆ ಸರ್ಕಾರ ವಿಳಂಬ ಮಾಡುತ್ತಿದೆ. ಕಾಮಗಾರಿ ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇನೆ. ಕಾರಂಜಾ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡಲು 84 ಕೋಟಿ ಮೊತ್ತದ ಯೋಜನೆ ತಂದಿದ್ದು, ಕೆಲಸ ಆರಂಭವಾಗಬೇಕಿದೆ. ಹೆಡಗಾಪೂರನಲ್ಲಿ 34.49 ಕೋಟಿಯ ಜಾನುವಾರು ತಳಿ ಸಂವರ್ಧನಾ ಕೇಂದ್ರ ನಿರ್ಮಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ವನಮಾರಪಳ್ಳಿಯಲ್ಲಿ 22 ಕೋಟಿಯ ಕಿತ್ತೂರು ಚನ್ನಮ್ಮ ವಸತಿ ಶಾಲೆ, ಚಿಮ್ಮೇಗಾಂವನಲ್ಲಿ 20 ಕೋಟಿಯ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಬಲ್ಲೂರ(ಜೆ)ನಲ್ಲಿ 20 ಕೋಟಿಯ ಇಂದಿರಾಗಾAಧಿ ವಸತಿ ಶಾಲೆ, 18 ಕೋಟಿ ವೆಚ್ಚದ ಹೊರಂಡಿ, ಚಿಂತಾಕಿ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳು, ಕಮಲನಗರದಲ್ಲಿ ಮಿನಿ ವಿಧಾನಸೌಧಕ್ಕೆ 15 ಕೋಟಿ, 13.20 ಕೋಟಿಯ ಸುಸಜ್ಜಿತ ನ್ಯಾಯಾಲಯಗಳ ಸಂಕೀರ್ಣ, 10 ಕೋಟಿ ವೆಚ್ಚದಲ್ಲಿ ವಿಶಾಲ ಉಗ್ರಾಣ ಸೇರಿದಂತೆ ಹತ್ತು ಹಲವು ಯೋಜನೆಗಳಿವೆ ಎಂದು ತಿಳಿಸಿದರು.
ಔರಾದ(ಬಿ) ಪಟ್ಟಣ ಸರ್ವಾಂಗೀಣ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಪಟ್ಟಣಕ್ಕೆ ಮಾಸ್ಟರ್ ಪ್ಲಾನ್ ಮಂಜೂರು ಮಾಡಿಸಿದ್ದೇನೆ. ಟ್ರೀ ಪಾರ್ಕ್, ಹೈಟೆಕ್ ಪಶು ಆಸ್ಪತ್ರೆ, ಪದವಿ ಕಾಲೇಜು, ಡಿಪ್ಲೋಮಾ ಕಾಲೇಜು, ಐಟಿಐ ಕಾಲೇಜು, ವಸತಿ ಶಾಲೆಗಳು, ಸುಸಜ್ಜಿತ ಪಟ್ಟಣ ಪಂಚಾಯಿತಿ ಕಟ್ಟಡ, ಆದರ್ಶ ವಿದ್ಯಾಲಯದಲ್ಲಿ ಪಿಯಸಿ ಆರಂಭ, ಶಾಲೆ, ಅಂಗನವಾಡಿ ಕಟ್ಟಡ, ರಸ್ತೆ ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅವಶ್ಯಕವಾದ ಎಲ್ಲ ಕೆಲಸಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಔರಾದ(ಬಿ) ಪಟ್ಟಣ ಮಾದರಿಯಾಗಿ ಪರಿವರ್ತನೆಯಾಗಲಿದೆ. ಕಮಲನಗರ ತಾಲ್ಲೂಕಿನಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದರು.
ಸಾಕಷ್ಟು ತ್ಯಾಗ, ಬಲಿದಾನಗಳ ನಂತರ ನಮಗೆ ಸ್ವಾತಂತ್ರö್ಯ ಸಿಕ್ಕಿದೆ. ಸ್ವಾತಂತ್ರö್ಯದ ಮಹತ್ವ, ಹೋರಾಟಗಾರರ ಬಗ್ಗೆ ಮುಂದಿನ ಪೀಳಿಗೆಗೆ ಸರಿಯಾಗಿ ತಿಳಿಸುವ ನಿಟ್ಟಿನಲ್ಲಿ ಕೆಲಸವಾಗಬೇಕು. ಈ ದಿಶೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗಾ ಅಭಿಯಾನವನ್ನು ಆರಂಭಿಸಿದ್ದಾರೆ. ಔರಾದ(ಬಿ) ಸೇರಿದಂತೆ ದೇಶದೆಲ್ಲೆಡೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಯುವಜನತೆಗೆ ನಮ್ಮ ದೇಶದ ಇತಿಹಾಸವನ್ನು ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿ ರಾಷ್ಟçದ ವಿರುದ್ಧ ಯಶಸ್ವಿಯಾಗಿ ಆಪರೇಷನ್ ಸಿಂಧೂರ್ ನಡೆಸಿ ತಕ್ಕ ಪಾಠ ಕಲಿಸಿದ್ದಾರೆ. ಇದರಲ್ಲಿ ಶೌರ್ಯದಿಂದ ಹೋರಾಡಿದ ವಾಯುಸೇನೆಯ ಯೋಧರಿಗೆ ವೀರಚಕ್ರ ಪ್ರಶಕ್ತಿ ಘೋಷಿಸಿರುವುದು ಸಂತೋಷ ತಂದಿದೆ. ಪ್ರಧಾನಿಯವರ ನೇತೃತ್ವದಲ್ಲಿ ದೇಶ ಸಾಕಷ್ಟು ಸುಧಾರಿಸಿದೆ. ಹತ್ತು ಹಲವು ಯೋಜನೆಗಳು ಜನಸಾಮಾನ್ಯರಿಗೆ ವರದಾನವಾಗಿ ಪರಿಣಮಿಸಿವೆ ಎಂದರು. ಇತಿಹಾಸ ತಜ್ಞ ಡಾ.ಶಿವಕುಮಾರ ಉಪ್ಪೆ ಅವರು ವಿಶೇಷ ಉಪನ್ಯಾಸ ನೀಡಿ ಭಾರತದಲ್ಲಿ ನಡೆದ ಸ್ವಾತಂತ್ರö್ಯ ಹೋರಾಟಗಳು, ಅದರ ಮಹತ್ವದ ಕುರಿತು ವಿವರಣೆ ನೀಡಿದರು.
ತಹಸೀಲ್ದಾರರಾದ ಮಹೇಶ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಪಟ್ಟಣ ಪಂಚಾಯತ ಅಧ್ಯಕ್ಷರಾದ ಸರುಬಾಯಿ ಘೂಳೆ, ಧೊಂಡಿಬಾ ನರೋಟೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ, ಶಿವಕುಮಾರ ಘಾಟೆ, ಡಾ.ಗಾಯತ್ರಿ, ರವೀಂದ್ರ, ಧೂಳಪ್ಪ ಸೇರಿದಂತೆ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದೇ ವೇಳೆ ಪಿಎಸ್‌ಐ ವಾಸೀಮ್ ಪಟೇಲ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ ಸೇರಿ ವಿವಿಧ ಶಾಲಾ ಕಾಲೇಜುಗಳ ತಂಡದವರು ಪಾಲ್ಗೊಂಡರು. ವಿವಿಧ ಶಾಲೆ-ಕಾಲೇಜಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಸಕರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಶಿಕ್ಷಕರಾದ ಸತೀಷ ಮಜಗೆ, ಮಹಾನಂದ ಎಂಡೆ ಅವರು ನಿರೂಪಿಸಿದರು.
ಬಿಜೆಪಿ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ: ಔರಾದ(ಬಿ) ಬಿಜೆಪಿ ಮಂಡಲ ಕಛೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ, ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಬಸವರಾಜ ಹಳ್ಳೆ, ರಮೇಶ ಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
