ಧರ್ಮಸ್ಥಳ ಷಡ್ಯಂತ್ರ: ಔರಾದನಲ್ಲಿಂದು ಬೃಹತ್ ಪ್ರತಿಭಟನೆ
—
ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಒಳಸಂಚು ಮತ್ತು ಕುತಂತ್ರಗಳನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ ಔರಾದ(ಬಿ) ಮಂಡಲದ ವತಿಯಿಂದ ಆ.25ರಂದು ಔರಾದ(ಬಿ) ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಶಾಸಕರಾದ ಪ್ರಭು ಬಿ.ಚವ್ಹಾಣ ಅವರ ನೇತೃತ್ವದಲ್ಲಿ ನಡೆಯುವ ಪ್ರತಿಭಟನಾ ಮೆರವಣಿಗೆಯು ಬೆಳಗ್ಗೆ 10 ಗಂಟೆಗೆ ಪಟ್ಟಣದ ಎಪಿಎಂಸಿ ವೃತ್ತದಲ್ಲಿ ಚಾಲನೆಗೊಂಡು, ಪ್ರಮುಖ ಮಾರ್ಗಗಳ ಮೂಲಕ ಬಸವೇಶ್ವರ ವೃತ್ತದಲ್ಲಿ ಕೊನೆಗೊಳ್ಳುವುದು. ನಂತರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ.
ರಾಜ್ಯದ ಪುಣ್ಯಕ್ಷೇತ್ರಗಳಲ್ಲಿ ಪ್ರಮುಖವಾಗಿರುವ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪಿತೂರಿಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಸೇರಿದಂತೆ ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
