Thursday, December 11, 2025
HomePopularಬೀದರ್ ಅತಿವೃಷ್ಟಿ:100 ಕೋಟಿ ರೂ. ವಿಶೇಷ ಪರಿಹಾರಕ್ಕೆ ಸಿ.ಎಂಗೆ. ಈಶ್ವರ ಖಂಡ್ರೆ ಮನವಿ

ಬೀದರ್ ಅತಿವೃಷ್ಟಿ:100 ಕೋಟಿ ರೂ. ವಿಶೇಷ ಪರಿಹಾರಕ್ಕೆ ಸಿ.ಎಂಗೆ. ಈಶ್ವರ ಖಂಡ್ರೆ ಮನವಿ

ಬೀದರ್ ಅತಿವೃಷ್ಟಿ:100 ಕೋಟಿ ರೂ. ವಿಶೇಷ ಪರಿಹಾರಕ್ಕೆ ಸಿ.ಎಂಗೆ. ಈಶ್ವರ ಖಂಡ್ರೆ ಮನವಿ
ಬೀದರ್ : ಬೀದರ್ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿ ಆಗಿದ್ದು, 100 ಕೋಟಿ ರೂ. ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು, ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆ ನಾಶವಾಗಿದ್ದು, ನೂರಾರು ಮನೆಗಳು ಹಾನಿಗೊಳಗಾಗಿವೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯವೂ ನೀರು ಪಾಲಾಗಿದೆ, ಜೊತೆಗೆ ಕೆಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಕಡಿತವಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್. ನಿಯಮಾವಳಿಯಂತೆ ಸಮೀಕ್ಷೆ ನಡೆಸಿದ್ದು, ಪ್ರಾಥಮಿಕ ಅಂದಾಜಿನAತೆ ಸುಮಾರು 500 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಮೊದಲೇ ಹಿಂದುಳಿದಿರುವ ಬೀದರ್ ಜಿಲ್ಲೆ ಈ ಅನಾಹುತಕಾರಿ ಮಳೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ರೈತರು, ಬಡಜನರು, ಕೂಲಿಕಾರ್ಮಿಕರು ಆಂತಕದಲ್ಲಿ ಕಾಲ ಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ತತ್ ಕ್ಷಣವೇ ನೊಂದ ಜನರ ನೆರವಿಗೆ ಬರುವಂತೆ ಈಶ್ವರ ಖಂಡ್ರೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3