ಬೆಳೆ ಹಾನಿ ಪ್ರದೇಶಗಳಿಗೆ ಶಾಸಕ ಪ್ರಭು ಚವ್ಹಾಣ ಭೇಟಿ
ಔರಾದ(ಬಿ) ಕ್ಷೇತ್ರಕ್ಕೆ 100 ಕೋಟಿ ಪ್ಯಾಕೇಜ್ ಘೋಷಿಸಲು ಆಗ್ರಹ
—
ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅತಿವೃಷ್ಟಿಯಿಂದ ಭಾರೀ ಹಾನಿಯಾಗಿರುವ ಔರಾದ(ಬಿ) ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಆ.31ರಂದು ಸ್ವತಃ ಭೇಟಿ ನೀಡಿ ಪರಿಶೀಲಿಸಿದರು.
ನಾನು ರೈತರ ಪರವಾಗಿದ್ದೇನೆ. ಕ್ಷೇತ್ರದಲ್ಲಿ ತೀವ್ರ ಮಳೆಯಾಗುತ್ತಿರುವುದನ್ನು ಕಂಡು ತಕ್ಷಣ ಮುಖ್ಯಮಂತ್ರಿ, ಸಚಿವರು ಹಾಗೂ ಸಂಬAಧಪಟ್ಟ ಅಧಿಕಾರಿಗಳನ್ನು ಖುದ್ದಾಗಿ ಭೇಟಿಮಾಡಿ ಬೆಳೆ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ, ವಿಧಾನಸಭಾ ಅಧಿವೇಶನದಲ್ಲಿಯೂ ಈ ಬಗ್ಗೆ ಗಮನ ಸೆಳೆದಿದ್ದೇನೆ. ರೈತರಿಗೆ ಪರಿಹಾರ ವಿತರಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದೇನೆ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು.

ಹೊರಂಡಿ, ಕಾಳಗಾಪೂರ, ಸೋನಾಳ, ಖೇಡ್, ಸಂಗಮ್, ಸಾವಳಿ, ಹೊಳಸಮುದ್ರ, ತೋರ್ಣಾ, ಬಳತ್, ಹಾಲಳ್ಳಿ, ನಿಡೋದಾ, ಹೆಡಗಾಪೂರ, ರಕ್ಷ್ಯಾಳ, ಯನಗುಂದಾ, ತೇಗಂಪೂರ, ಎಕಂಬಾ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿ ಬೆಳೆ ಹಾನಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರು ಬೆಳೆ ಹಾನಿಯ ಬಗ್ಗೆ ಮಾಹಿತಿ ನೀಡಿದರು. ಈ ಬಾರಿ ಹಿಂದೆAದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆಯಾಗಿದ್ದು, ಬಹಳಷ್ಟು ಕಷ್ಟದಿಂದ ಬೆಳೆಸಿದ ಸೋಯಾ, ಉದ್ದು, ಹೆಸರು, ಹತ್ತಿ, ತೊಗರಿ ಸೇರಿದಂತೆ ಎಲ್ಲ ಬೆಳೆಗಳು ನೀರು ಪಾಲಾಗಿವೆ. ಈ ಸಲ ಹೆಚ್ಚಿನ ಲಾಭ ಸಿಗಬಹುದೆಂದು ನಿರೀಕ್ಷಿಸಿದ್ದ ನಮಗೆ ಬಹಳ ಅನ್ಯಾಯವಾಗಿದೆ. ಜೀವನಕ್ಕೆ ಕೃಷಿಯನ್ನೇ ನಂಬಿದ ನಮಗೆ ಮುಂದೇನು ಮಾಡಬೇಕೆಂಬುದು ದಿಕ್ಕು ತೋಚುತ್ತಿಲ್ಲವೆಂದು ಅಳಲನ್ನು ತೋಡಿಕೊಂಡರು.

ನಾನು ರೈತರ ಪರವಾಗಿದ್ದೇನೆ. ಕ್ಷೇತ್ರದಲ್ಲಿ ತೀವ್ರ ಮಳೆಯಾಗುತ್ತಿರುವುದನ್ನು ಕಂಡು ತಕ್ಷಣ ಮುಖ್ಯಮಂತ್ರಿ, ಸಚಿವರು ಹಾಗೂ ಸಂಬAಧಪಟ್ಟ ಅಧಿಕಾರಿಗಳನ್ನು ಖುದ್ದಾಗಿ ಭೇಟಿಮಾಡಿ ಬೆಳೆ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ, ವಿಧಾನಸಭಾ ಅಧಿವೇಶನದಲ್ಲಿಯೂ ಈ ಬಗ್ಗೆ ಗಮನ ಸೆಳೆದಿದ್ದೇನೆ. ರೈತರಿಗೆ ಪರಿಹಾರ ವಿತರಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದೇನೆ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು.
ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರೊಂದಿಗೆ ಸೌಜನ್ಯತೆಯಿಂದ ವ್ಯವಹರಿಸಬೇಕು. ಮಳೆಯಿಂದ ಜನ ಈಗಾಗಲೇ ಕಂಗಾಲಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು. ನೊಂದವರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು. ಬೆಳೆ, ಮನೆ ಮತ್ತು ಜೀವ ಹಾನಿಯ ಕುರಿತು ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಿ ಅಗತ್ಯ ಪರಿಹಾರ ಕಲ್ಪಿಸಲು ಯತ್ನಿಸಬೇಕು. ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಎಲ್ಲ ಸಮೀಕ್ಷಾ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಮಳೆ ಹಾನಿಯಿಂದ ತೊಂದರೆ ಅನುಭವಿಸಿದ ಎಲ್ಲರನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ನಿರ್ದೇಶನ ನೀಡಿದರು.
ಮಳೆಯಿಂದ ಹಾನಿಗೊಳಗಾದ ಎಲ್ಲ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಭೇಟಿ ನೀಡಿದ ಪ್ರತಿ ಗಾಮದಲ್ಲಿ ಸುಮಾರು 500 ರಿಂದ 1000 ಎಕರೆಯಷ್ಟು ಬೆಳೆ ಹಾನಿಯಾಗಿದೆ. ಔರಾದ(ಬಿ) ಹಾಗೂ ಕಮನಗರ ತಾಲ್ಲೂಕುಗಳಲ್ಲಿ 50 ಸಾವಿರ ಎಕರೆಯಷ್ಟು ಬೆಳೆ ಹಾನಿಯಾಗಿರುವ ಅಂದಾಜಿದೆ. ರಸ್ತೆ, ಸೇತುವೆ, ಕೆರೆ-ಕಟ್ಟೆಗಳು, ಬ್ರಿಜ್ ಕಂ ಬ್ಯಾರೇಜ್‌ಗಳು, ಶಾಲೆ, ಅಂಗನವಾಡಿ ಕೇಂದ್ರಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಹಾನಿಗೆ ಒಳಗಾಗಿವೆ.

ಔರಾದ(ಬಿ) ಕ್ಷೇತ್ರವನ್ನು ಅತೀವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ರೈತರಿಗೆ ಪರಿಹಾರ ಘೋಷಣೆ ಮಾಡಬೇಕು. ಬೆಳೆ ವಿಮೆ ಸೌಲಭ್ಯ ಎಲ್ಲರಿಗೂ ತಲುಪಿಸಬೇಕು. ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ, ಬ್ರಿಜ್ ಕಂ ಬ್ಯಾರೇಜ್, ಶಾಲೆ, ಅಂಗನವಾಡಿ, ಸರ್ಕಾರಿ ಕಛೇರಿಗಳ ದುರಸ್ತಿ ಮತ್ತು ಸುಧಾರಣೆಗೆ ಔರಾದ(ಬಿ) ಕ್ಷೇತ್ರಕ್ಕೆ 100 ಕೋಟಿಗೂ ಹೆಚ್ಚಿನ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಮಲನಗರ ತಹಸೀಲ್ದಾರರಾದ ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತ ಕೌಟಗೆ, ಲೋಕೋಪಯೋಗಿ ಇಲಾಖೆ ಎಇಇ ಪ್ರೇಮಸಾಗರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧೂಳಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ ರಂಗೇಶ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರೈತ ಮೋರ್ಚಾ ಅಧ್ಯಕ್ಷ ಶಿವರಾಜ ಅಲ್ಮಾಜೆ, ಶಿವಕುಮಾರ ಝುಲ್ಫೆ, ನಾಗೇಶ ಪತ್ರೆ, ಬಂಟಿ ರಾಂಪೂರೆ, ಪ್ರವೀಣ ಕಾರಬಾರಿ, ಭರತ ಕದಂ, ಸುರೇಶ ಭೋಸ್ಲೆ ಸೇರಿದಂತೆ ಇತರರಿದ್ದರು.